ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಶಿಯಲ್ಲಿ ಸಿಲುಕಿದ್ದ 164 ಮಂದಿ ಪ್ರವಾಸಿಗರು ತವರಿಗೆ ವಾಪಸ್ಸು

ಬೆಂಗಳೂರು:ದೇಶಾದ್ಯಂತ ಅಗ್ನಿಪಥ​ ನೇಮಕಾತಿ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇದರಿಂದ ಉತ್ತರ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ತೆರಳಿದ್ದ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 164 ಕ್ಕೂ ಅಧಿಕ ಪ್ರವಾಸಿಗರು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದು, ಅವರ ಕಣ್ಣಲ್ಲಿ ಇಂದು ಕೃತಜ್ಞತಾ ಭಾವ ಕಂಡು ಬಂತು.

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಾದ ಕಾಶಿ, ವಾರಣಾಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಿದ್ದ ವೇಳೆ ಆ ಭಾಗದಲ್ಲಿ ಅಗ್ನಿಪಥ್ ವಿರೋಧಿಸಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿದ್ದವು. ಇದರಿಂದ ಆತಂಕಕ್ಕೆ ಈಡಾಗಿದ್ದ ಪ್ರವಾಸಿಗರನ್ನು ಸರ್ಕಾರ ಅಬಕಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ 164 ಪ್ರವಾಸಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತಂದಿದೆ.

ವಯೋವೃದ್ಧರು ಸೇರಿದಂತೆ ಸುರಕ್ಷಿತವಾಗಿ ಬುಧವಾರ ಬೆಂಗಳೂರಿಗೆ ಆಗಮಿಸಿದ 164ಕ್ಕೂ ಅಧಿಕ ಪ್ರವಾಸಿಗರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿ ಶಾಸಕರೂ ಆದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಕಚೇರಿಗೆ ಮಧ್ಯಾಹ್ನ ಆಗಮಿಸಿದರು.

Edited By :
PublicNext

PublicNext

23/06/2022 07:18 pm

Cinque Terre

13.31 K

Cinque Terre

0

ಸಂಬಂಧಿತ ಸುದ್ದಿ