ಆನೇಕಲ್: ಸಾಹಿತ್ಯ ಪರಿಷತ್ ವತಿಯಿಂದ ಕರ್ನಾಟಕದ ಗಡಿಭಾಗವಾದ ಕಾಸರಗೋಡಿನ ಕನ್ನಡ ಶಾಲೆಗಳಿಗೆ ಕನ್ನಡ ಅರಿಯದ ಶಿಕ್ಷಕರನ್ನು ನೇಮಿಸಿ ಕೊಳ್ಳುತ್ತಿರುವುದನ್ನು ಖಂಡಿಸಿ ತಹಶೀಲ್ದಾರ್ ಮುಖೇನ ಮುಖ್ಯಮಂತ್ರಿಗಳಿಗೆ ಪ್ರತಿಭಟನೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಆನೇಕಲ್ ಪಟ್ಟಣದ ತಾಲೂಕು ಕಚೇರಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಪ್ರತಿಭಟನೆಯನ್ನು ಉದ್ದೇಶಿಸಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಆದೂರು ಪ್ರಕಾಶ್ ಮಾತನಾಡಿ, ಕನ್ನಡಕ್ಕೆ ದಿನನಿತ್ಯ ಇಂತಹ ಅಪಮಾನಗಳು ನಡೆಯುತ್ತಲೇ ಇರುವುದು ಖಂಡನೀಯ ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಗೆ ಈ ರೀತಿಯಾದ ಅಪಮಾನವನ್ನು ಅಸಡ್ಡೆಯನ್ನು ಸಹಿಸಿಕೊಳ್ಳಲು ಆಗುವುದಿಲ್ಲ ಕೂಡಲೇ ಸರ್ಕಾರ ಸಮಸ್ಯೆಯನ್ನು ಸರಿಪಡಿಸಬೇಕು ಭಾಷೆಯನ್ನು ಉಳಿಸಿ ಬೆಳೆಸಬೇಕಾದರೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಾಗ ಮುಂದೆ ಆಗಬಹುದಾದ ಅಡತಡೆಗಳು ನಿವಾರಣೆಯಾಗುತ್ತದೆ ಎಂದರು.
Kshetra Samachara
09/03/2022 08:06 pm