ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಯುವತಿಯ ಚಿಕಿತ್ಸೆಗಾಗಿ ಬಿಬಿಎಂಪಿ ಅಧಿಕಾರಿ ಮತ್ತು ಪೌರಕಾರ್ಮಿಕರ ಸಂಘದಿಂದ ಒಂದು ಲಕ್ಷ ರೂಪಾಯಿ ಧನ ಸಹಾಯ ನೀಡಲಾಗಿದೆ. ಮೂರುದಿನಗಳ ಹಿಂದೆ ಆಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗಾಗಿ ಬಿಬಿಎಂಪಿ ಅಧಿಕಾರಿಗಳು ಮತ್ತು ಪೌರಕಾರ್ಮಿಕರು ಮುಂದೆ ಬಂದು ಯುವತಿಯ ಚಿಕಿತ್ಸೆಗೆ ಒಂದು ಲಕ್ಷ ರೂಪಾಯಿ ಹಣ ನೀಡಿದ್ದಾರೆ.
ಯುವತಿಯ ಸ್ಥಿತಿ ಗಂಭೀರವಾಗಿದ್ದು ಸಾವು ಮತ್ತು ಜೀವನದ ನಡುವೆ ಹೋರಾಡುತ್ತಿದ್ದಾರೆ. 36 ಪರ್ಸೆಂಟ್ನಷ್ಟು ದೇಹದ ಭಾಗ ಆಸಿಡ್ ದಾಳಿಯಿಂದ ಸುಟ್ಟುಹೋಗಿದ್ದು ಸೆಂಟ್ ಜಾನ್ಸ್ ಆಸ್ಪತ್ರೆಯ ಐಸಿಯುನಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ನವೀನ್
ಪಬ್ಲಿಕ್ ನೆಕ್ಸ್ಟ್, ಬೆಂಗಳೂರು.
Kshetra Samachara
30/04/2022 06:36 pm