ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೀದಿ ಬದಿಯಲ್ಲಿ ವ್ಯಾಪಾರ ತೆರವು ಮಾಡಿದ್ದ ಕ್ರಮ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ತೋಗೂರು ಗ್ರಾಮ ಪಂಚಾಯಿತಿ ಮುಂಭಾಗ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ದಲಿತ ಸಂಘರ್ಷ ಸಮಿತಿ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಹಾಗೂ ಸಮತಾ ಸೈನಿಕ ದಳದ ಸಹಭಾಗಿತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆಯನ್ನ ನಡೆಸಿದರು.

ಪ್ರತಿಷ್ಠಿತ ಎಲೆಕ್ಟ್ರಾನಿಕ್ ಸಿಟಿ ಸಮೀಪದ ನೀಲಾದ್ರಿ ರಸ್ತೆಯಲ್ಲಿ ಸುಮಾರು ವರ್ಷಗಳಿಂದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ನೋಟಿಸು ನೀಡದೇ ತೆರವು ಮಾಡಿದ್ದ ಕ್ರಮವನ್ನ ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಅಧಿಕಾರಿಗಳೇ ಕಾಯ್ದೆ ಹಾಗೂ ಕಾನೂನುಗಳನ್ನು ಗಾಳಿಗೆ ತೂರಿ ಬೀದಿ ಬದಿ ವ್ಯಾಪಾರಿಗಳ ವಿಚಾರದಲ್ಲಿ ಅಮಾನುಷವಾಗಿ ನಡೆದುಕೊಂಡಿರುವ ಕ್ರಮವನ್ನು ಖಂಡಿಸಲಾಯಿತು.

ಅಕ್ರಮವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಹಾಗೂ ದೊಡ್ಡ ವ್ಯಾಪಾರಿಗಳನ್ನು ಓಲೈಸುವುದಕ್ಕಾಗಿ ಬಡವರ ಮೇಲೆ ಈ ದೌರ್ಜನ್ಯ ಮಾಡಲಾಗುತ್ತಿದ್ದು ಇದು ನಿಜಕ್ಕೂ ಖಂಡನೀಯ ಎಂದು RPI ಸಂಸ್ಥಾಪಕರಾದ ವೆಂಕಟಸ್ವಾಮಿ ತಿಳಿಸಿದರು. ಕೂಡಲೇ ಈ ಒಂದು ಅನ್ಯಾಯವನ್ನು ಸರಿಪಡಿಸಿ ಬೀದಿಬದಿ ವ್ಯಾಪಾರಿಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ದೊಡ್ಡದು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಪತ್ರವನ್ನು ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

15/09/2022 06:48 pm

Cinque Terre

6.93 K

Cinque Terre

0

ಸಂಬಂಧಿತ ಸುದ್ದಿ