ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ- ಬೆಸ್ಕಾಂ ಕಚೇರಿ ಮುಂದೆ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರ: ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಂ ಬೆಳೆಗಳು ಒಣಗುತ್ತಿವೆ ಎಂದು ರೈತರು ದೂರಿ ನಗರದ ಗ್ರಾಮಾಂತರ ಉಪ ವಿಭಾಗದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ದೊಡ್ಡಬಳ್ಳಾಪುರ ತಾಲೂಕಿನ ವಿದ್ಯುತ್ ಫೀಡರ್ ನಂ.8 ರಲ್ಲಿರುವ ಹಾಡೋನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ತಿರುಮಗೊಂಡನಹಳ್ಳಿ, ಎಸ್ ನಾಗೇನಹಳ್ಳಿ ಮಲ್ಲಾತಹಳ್ಳಿ, ವಡ್ಡರಹಳ್ಳಿ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿವೆ ಎಂದು ಅಳಲು ತೋಡಿಕೊಂಡರು.

ಬಳಿಕ ಬೆಸ್ಕಾಂ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಇನಾಯತ್ ಉಲ್ಲಾ ಖಾನ್ ಅವರಿಗೆ ರೈತರು ಮನವಿ ಸಲ್ಲಿಸಿದರು. ರೈತರ ಮನವಿ ಸ್ವೀಕರಿಸಿ ಮಾತನಾಡಿದ ಇನಾಯತ್ ಉಲ್ಲಾ ಖಾನ್ ಅವರು, ಡಿ ಕ್ರಾಸ್ ಸ್ಟೇಷನ್‌ನಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಇತ್ತು. ಸಂಬಂಧಪಟ್ಟ ಅಧಿಕಾರಿಗಳಿಗೆ ಈಗ ತಿಳಿಸಿದ್ದು, ಎರಡ್ಮೂರು ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ರೈತರಿಗೆ ಭರವಸೆ ನೀಡಿದರು.

Edited By : Shivu K
Kshetra Samachara

Kshetra Samachara

04/03/2022 12:58 pm

Cinque Terre

2.2 K

Cinque Terre

0

ಸಂಬಂಧಿತ ಸುದ್ದಿ