ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಕೋಲಾರದಿಂದ ಕೃಷ್ಣರಾಜಪುರಕ್ಕೆ ಸಾಗಿಸಲಾಗುತ್ತಿತ್ತು. ಅನ್ನಭಾಗ್ಯದ ಅಕ್ಕಿ ಬಡವರ ಹೊಟ್ಟೆ ಹಸಿವು ನೀಗಿಸಲು ಸಾಮಾನ್ಯರ ಕೈಸೇರುವ ಬದಲು ಕಳಸಂತೆಯಲ್ಲಿ ಮಾರಾಟವಾಗುತ್ತಿದೆ.
ಕೋಲಾರದಿಂದ ಅಕ್ರಮವಾಗಿ ಸಾಗಾಟ ಆಗುತ್ತಿರುವ ಅನ್ನಭಾಗ್ಯ ಅಕ್ಕಿಯನ್ನು ಸಾರ್ವಜನಿಕರೆ ಚೇಸ್ ಮಾಡಿ ಹಿಡಿದಿದ್ದಾರೆ. ಸದ್ಯ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಎಸಗಿದವರ ವಿರುದ್ಧ ತನಿಖೆ ಆರಂಭಿಸಲಾಗಿದೆ. ಅನ್ನಭಾಗ್ಯ ಅಕ್ಕಿನ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
PublicNext
07/07/2022 11:00 am