ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿಧಾನಸೌಧದ ಅಗ್ನಿಶಾಮಕ ಕಚೇರಿಯ ಸಂಪಿನಲ್ಲಿ ಮೃತದೇಹ ಪತ್ತೆ

ಬೆಂಗಳೂರು: ವಿಧಾನಸೌಧದ ಅಗ್ನಿಶಾಮಕ ಕಚೇರಿಯ ನೀರಿನ ಸಂಪಿನಲ್ಲಿ ಮೃತ ದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮೂರು ದಿನಗಳ ಹಿಂದೆ ಕೊಲೆ ಮಾಡಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

ಸಂಪನಲ್ಲಿರುವ ನೀರನ್ನು ಅಗ್ನಿಶಾಮಕ ಸಿಬ್ಬಂದಿ ಖಾಲಿ ಮಾಡಿ ಶವವನ್ನು ಹೊರ ತೆಗೆದಿದ್ದಾರೆ. ಇನ್ನು ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಮೃತ ವ್ಯಕ್ತಿಯ ‌ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Ms ಬಿಲ್ಡಿಂಗ್ ಸಂಪ್‌ನಲ್ಲಿ‌ ಶವವಾಗಿ ಪತ್ತೆಯಾದ ವ್ಯಕ್ತಿ ಸುಮಾರು 25-30 ವರ್ಷದ ವಯಸ್ಸಿನವರು ಎನ್ನಲಾಗಿದೆ. ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆಯು ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By : Shivu K
Kshetra Samachara

Kshetra Samachara

18/08/2022 01:46 pm

Cinque Terre

3.84 K

Cinque Terre

0

ಸಂಬಂಧಿತ ಸುದ್ದಿ