ಬೆಂಗಳೂರು: ಕೋವಿಡ್ ಮಾರ್ಗಸೂಚಿ ಅನುಸರಿಸಿಕೊಂಡು ಕ್ರಿಸ್ ಮಸ್ ಆಚರಿಸಲು ಬಿಬಿಎಂಪಿ ಅನುಮತಿ ನೀಡಿದೆ.
ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಹಿತಿ ನೀಡಿದ್ದಾರೆ. ಚರ್ಚ್ ಹಾಗೂ ಕಮ್ಯೂನಿಟಿ ಹಾಲ್ ಗಳಲ್ಲಿ ಜನರು ಹೆಚ್ಚಾಗಿ ಸೇರಬಾರದು., ಗುಂಪು ಗೂಡಕೂಡದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ನಿಯಮ ಪಾಲಿಸಬೇಕೆಂದು ಬಿಬಿಎಂಪಿ ತಿಳಿಸಿದೆ.
ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಹೀಗಾಗಿ ಕ್ರಿಸ್ ಮಸ್ ಸಂಭ್ರಮಾಚರಣೆಗೆ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪಾಲಿಕೆ ಹೇಳಿದೆ.
Kshetra Samachara
11/12/2021 09:11 am