ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ನೂರಾರು ಅಭ್ಯರ್ಥಿಗಳು ಇಂದು ಧರಣಿ ನಡೆಸಿದರು.
ರಾಜ್ಯ ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 3,000ಕ್ಕೂ ಹೆಚ್ಚು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳ ಆಕ್ರೋಶ ಕಟ್ಟೆಯೊಡೆದಿದ್ದು, ಉದ್ಯೋಗಾಕಾಂಕ್ಷಿಗಳು ಕೆಪಿಎಸ್‌ಸಿ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ (ಜಿಪಿ) 106 ಹುದ್ದೆಗಳ ನೇಮಕಾತಿಯ ಮುಖ್ಯಪರೀಕ್ಷೆ, ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) 1,323, ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಿರಿಯ ಎಂಜಿನಿಯರ್ 330, ಸಹಾಯಕ ಎಂಜಿನಿಯರ್ 660, ಗ್ರೂಪ್ ‘ಸಿ’ (ತಾಂತ್ರಿಕೇತರ) 387, ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ (ಎಸಿಎಫ್) 16 ಹೀಗೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆದು ಹಲವು ತಿಂಗಳುಗಳೇ ಕಳೆದಿವೆ. ಆದರೆ, ಕೆಪಿಎಸ್‌ಸಿ ಮಾತ್ರ ಫಲಿತಾಂಶ ಪ್ರಕಟಿಸುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ಅಭ್ಯರ್ಥಿಗಳು ಕಂಗೆಟ್ಟಿದ್ದಾರೆ.
PublicNext
25/07/2022 04:04 pm