ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಜಂಟಿಯಾಗಿ ಕಾರಳ್ಳಿಯಲ್ಲಿ ಸಾಹಸ ಜಲಕ್ರೀಡೆ ಆಯೋಜಿಸಿತ್ತು.
ಕಾರಹಳ್ಳಿ ಗ್ರಾಮ ಪಂಚಾಯ್ತಿ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಜಲಕ್ರೀಡೆ ಇಂದು ನಡೆಸಲಾಯಿತು. ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಉದ್ಘಾಟಿಸಿದರು.
ಬೋಟಿಂಗ್, ಈಜು ಸೇರಿದಂತೆ ವಿವಿಧ ಕ್ರೀಡೆಗಳು ಜರುಗಿತು. ನೂರಾರು ಯುವಕ- ಯುವತಿಯರು ಜಲಕ್ರೀಡೆಯಲ್ಲಿ ಭಾಗವಹಿಸಿದರು. ಇದೇ ವೇಳೆ ಜಲಕ್ರೀಡೆಯಿಂದ ಏನೆಲ್ಲ ಪ್ರಯೋಜನಗಳಿವೆ ಎನ್ನುವುದನ್ನು ಜಿಲ್ಲಾಧಿಕಾರಿ ಹಾಗೂ ಶಾಸಕರು ವಿವರಿಸಿದರು.
- SureshBabu Public Next.ದೇವನಹಳ್ಳಿ
Kshetra Samachara
21/06/2022 08:54 pm