ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 513 ನೇ ಜಯಂತ್ಯುತ್ಸವವನ್ನು ಸರ್ಕಾರದ ವತಿಯಿಂದ ವಿಧಾನ ಸೌಧದ ಬ್ಯಾಕ್ವೆಟ್ ಹಾಲ್ ನಲ್ಲಿ ಇಂದು ಅದ್ದೂರಿಯಾಗಿ ಆಚರಿಸಲಾಯಿತು.

ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಾರಾಯಣಮೂರ್ತಿ ಪರವಾಗಿ ಸುಧಾ ನಾರಾಯಣಮೂರ್ತಿ, ಪಡುಕೋಣೆ ಪರವಾಗಿ ವಿಪುಲಕುಮಾರ ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಡಾ. ನಿರ್ಮಲಾನಂದ ಮಹಾಸ್ವಾಮಿಗಳು, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸಚಿವರಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ, ಕೆ. ಗೋಪಾಲಯ್ಯ, ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಮತ್ತು ಇತರರು ಉಪಸ್ಥಿತರಿದ್ದರು.

-- ಪ್ರವೀಣ್ ರಾವ್

Edited By : Somashekar
PublicNext

PublicNext

27/06/2022 05:20 pm

Cinque Terre

46.53 K

Cinque Terre

0

ಸಂಬಂಧಿತ ಸುದ್ದಿ