ಶಿವಾನಂದ ವೃತ್ತದ ಮೇಲು ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ. ಆಗಷ್ಟ್ ತಿಂಗಳ ಅಂತ್ಯದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು, ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನೆ ವಿಭಾಗದ ಮುಖ್ಯ ಎಂಜನೀಯರ್ ಲೋಕೇಶ್ ಮಾಹಿತಿ ನೀಡಿದ್ದಾರೆ.
ಸಂಚಾರ ದಟ್ಟಣೆ ತಪ್ಪಿಸಲು ಶಿವಾ ನಂದ ಮೇಲು ಸೇತುವೆ ಒಂದು ಭಾಗದಿಂದ ಅಂದ್ರೆ ಶೇಷಾದ್ರಿಪುರಂ ರೇಸ್ ಕೋರ್ಸ್‌ಗೆ ತಲುಪುವ ಮಾರ್ಗದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ. ಟ್ರಯಲ್ ರನ್ ಗೋಸ್ಕರ ಒಂದು ಭಾಗದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇನ್ನೊಂದು ಬದಿಯಲ್ಲಿ ಕಾಮಗಾರಿ ಭಾಕಿಯಿದೆ, ಈ ತಿಂಗಳ ಅಂತ್ಯ ದೊಳಗೆ ಪೂರ್ಣಗೊಳಿಸುವುದಾಗಿ ಲೋಕೇಶ್ ಅವರು ತಿಳಿಸಿದರು.
PublicNext
16/08/2022 02:46 pm