ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಇಂದು ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಸಹಯೋಗದಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಯಿತು.
ದೊಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಾನೀಶ್ ಕುಮಾರಿ ಜಾಗ ( ಕೆರೆ-ಕುಂಟೆ ತಿಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಜಾಗ) ಸರ್ವೇ ನಂ. 123/3 ರಲ್ಲಿ ನಾರಾಯಣರೆಡ್ಡಿ ಎಂಬುವರು 2014ರಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಪಂಚಾಯಿತಿಯಿಂದ ಪರವಾನಿಗೆ ಪಡೆದು ಆರು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಿಕೊಂಡಿದ್ರು.
ಈ ಬಗ್ಗೆ ಪಕ್ಕದ ಲತೀಫ್ ಎಂಬುವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ರು. ವಿಚಾರಣೆ ನಡೆಸಿದ ಕೋರ್ಟ್ ಅಕ್ರಮವಾಗಿ ಕಟ್ಟಿಕೊಂಡಿದ್ದ ಆರು ಅಂತಸ್ತಿನ ಕಟ್ಟಡ ಜಾಗದಲ್ಲಿ ಮೂರು ಅಂತಸ್ತಿನ ಜಾಗವನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿತು. ಈ ಹಿನ್ನೆಲೆಯಲ್ಲಿ ಆನೇಕಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಸೂಕ್ತ ಪೊಲೀಸ್ ಬಂದೋಬಸ್ತ್ ಜೊತೆಗೆ ತೆರವು ಕಾರ್ಯಾಚರಣೆ ಮಾಡಿದ್ರು.. ಇನ್ನು ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭಾಗಿಯಾಗಿದ್ದರು..
ಹರೀಶ್ ಗೌತಮನಂದ, ಪಬ್ಲಿಕ್ ನೆಕ್ಸ್ಟ್, ಆನೇಕಲ್
Kshetra Samachara
04/06/2022 04:24 pm