ಬೆಂಗಳೂರು: ಜ್ಞಾನ ಭಾರತಿ ಆವರಣದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಯನ್ನು ಟೆಂಡರ್ ಮೂಲಕವೇ ಕೈಗೆತ್ತಿಕೊಳ್ಳಬೇಕೆಂದು ರಾಜ್ಯ ಸರಕಾರ ಬಿಬಿಎಂಪಿಗೆ ಸೂಚನೆ ನೀಡಿದೆ.
ಬೆಂಗಳೂರು ವಿಶೇಷ ಮೂಲ ಸೌಕರ್ಯ ಯೋಜನೆಯಡಿಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ.
35.50 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ಜ್ಞಾನಭಾರತಿ ಆವರಣದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.
ಟೆಂಡರ್ ಕರೆಯದೇ ಕಾಮಗಾರಿ ನಡೆಸುವ ಉದ್ದೇಶವನ್ನು ಬಿಬಿಎಂಪಿ ಹೊಂದಿತ್ತು. ಆದರೆ, ಇದಕ್ಕೆ ಸರಕಾರ ಬ್ರೇಕ್ ಹಾಕಿದ್ದು, ಟೆಂಡರ್ ಕರೆದೇ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದೆ.
Kshetra Samachara
14/12/2021 12:22 pm