ಬೆಂಗಳೂರು ಅಭಿವೃದ್ಧಿಯ ಹಿನ್ನೆಲೆ ಬಜೆಟ್ ಕುರಿತು ರೂಪು -ರೇಷೆಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗುಪ್ತ, ಬಿಬಿಎಂಪಿ ಬಜೆಟ್ ಮಂಡಿಸಲು ಸಿದ್ಧರಾಗಿದ್ದೇವೆ. ಇದಕ್ಕಾಗಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಜತೆಗೆ ರಾಜ್ಯ ಸರ್ಕಾರದ ಬಜೆಟ್ ಅನ್ನು ಪರಿಗಣಿಸಿ ಎಲ್ಲ ಆದಾಯಗಳನ್ನು ಶೇಖರಿಸಿ ಉತ್ತಮ ಬಜೆಟ್ ಜನರಿಗೆ ನೀಡಲಾಗುವುದು ಎಂದು ಹೇಳಿದರು.
ಹೊಸ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು ಎಂದು ನುಡಿದರು.
Kshetra Samachara
05/02/2022 01:00 pm