ಬೆಂಗಳೂರು: ಹೆಬ್ಬಾಳ ಮತ್ತು ಸರ್ಜಾಪುರ ನಡುವಿನ ಮೆಟ್ರೊ ಮಾರ್ಗಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್‌ಸಿಎಲ್ ಟೆಂಡರ್ ಆಹ್ವಾನಿಸಿದೆ. ಬಿಡ್ಡುದಾರರು ಮೇ 17ರೊಳಗೆ ತಾಂತ್ರಿಕ ಮತ್ತು ಹಣಕಾಸು ಬಿಡ್ ಸಲ್ಲಿಸಬೇಕು. ಡಿಪಿಆರ್ ಸಿದ್ಧಪಡಿಸಲು 8 ತಿಂಗಳ ಗಡುವು ನಿಗದಿಪಡಿಸಲು ಬಿಎಂಆರ್‌ಸಿಎಲ್ ಉದ್ದೇಶಿಸಿದೆ.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ ಒಂದು ತಿಂಗಳ ಅವಧಿಯಲ್ಲೇ ಡಿಪಿಆರ್‌ಗೆ ಟೆಂಡರ್ ಪ್ರಕ್ರಿಯೆಯನ್ನು ಬಿಎಂಆರ್‌ಸಿಎಲ್ ಆರಂಭಿಸಿದೆ. 15 ಸಾವಿರ ಕೋಟಿ ರೂ. ಅಂದಾಜು ವೆಚ್ಚದ 37 ಕಿ.ಮೀ ಉದ್ದದ ಈ ಮಾರ್ಗವು ಅಗರ, ಕೋರಮಂಗಲ, ಡೇರಿ ವೃತ್ತದ ಮೂಲಕ ಹಾದುಹೋಗಲಿದೆ.
PublicNext
12/04/2022 07:56 am