ಬೆಂಗಳೂರು: ದಿನನಿತ್ಯ ಬಳಕೆಯ ವಸ್ತುಗಳು, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆನ್ನಲ್ಲೇ ಬಿಎಂಟಿಸಿ ಮತ್ತೊಂದು ಶಾಕ್ ಕೊಡಲು ಹೊರಟಿದೆ.
ಹೌದು. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಲು ಚಿಂತನೆ ನಡೆಸಿದ್ದು, ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ದರ ಏರಿಕೆಯ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ. 20ರಷ್ಟು ಟಿಕೆಟ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶೇ.35 ರಷ್ಟು ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದೆ.
Kshetra Samachara
13/04/2022 01:48 pm