ಬೆಂಗಳೂರು: ರಾಜಧಾನಿಯ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್ ಶಾಕಿಂಗ್ ನ್ಯೂಸ್. ಬಿಎಂಟಿಸಿ ಪ್ರಯಾಣ ದರವನ್ನು ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದೆ ಬಂದಿದೆ.
ಆರ್ಥಿಕ ನಷ್ಟದಿಂದ ಹೊರಬರಲು ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಟಿಸಿ ನಿಗಮ ಸರ್ಕಾ ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಸರ್ಕಾರದಿಂದ ಯಾವುದೇ ಆದೇಶ ಹೊರಬಿದ್ದಿಲ್ಲ. ತೈಲ ಬೆಲೆ ಏರಿಕೆ ಹಾಗೂ ನಿರ್ವ ಹಣಾ ವೆಚ್ಚದ ಪರಿಣಾಮ ಸಾಲದ ಸುಳಿಯಲ್ಲಿ ಬಿಎಂಟಿಸಿ ಸಿಲುಕಿದೆ. ಹೀಗಾಗಿ ಶೇ.35% ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದೆ.
Kshetra Samachara
13/04/2022 07:11 pm