ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿದ್ಯುತ್ ಕಡಿತ ಮತ್ತು ಟ್ರಾನ್ಸ್ ಫಾರ್ಮ್ ಬದಲಾವಣೆಗೆ 5 ಸಾವಿರ ಲಂಚ ಆರೋಪ

ದೊಡ್ಡಬಳ್ಳಾಪುರ: ಪದೇಪದೇ ವಿದ್ಯುತ್ ಕಡಿತ ಮತ್ತು ಟ್ರಾನ್ಸ್‌ಫಾರ್ಮ್ ಬದಲಾವಣೆಗೆ 5 ಸಾವಿರ ಲಂಚ ಕೇಳುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ನಿವೃತ ಕೆಎಎಸ್ ಅಧಿಕಾರಿ ಕೆ. ಮಥಾಯಿ ನೇತೃತ್ವದಲ್ಲಿ ರೈತರು ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕಳೆದೊಂದು ವಾರದಿಂದ ವಿದ್ಯುತ್ ಕಡಿತ ಪದೇ ಪದೇ ಆಗುತ್ತಿದೆ. 7 ಗಂಟೆ 3 ಫೇಸ್ ವಿದ್ಯುತ್ ಸರಬರಾಜಿಗೆ ಸರ್ಕಾರ ಆದೇಶ ನೀಡಿದೆ. ಆದರೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಆಗುತ್ತಿಲ್ಲ, 3 ಫೇಸ್ ವಿದ್ಯುತ್ ಕೊಡುವಾಗ ಪದೇ ಪದೇ ವಿದ್ಯುತ್ ಕಡಿತ ಮಾಡುತ್ತಿದ್ದಾರೆ. ನಿರಂತರ ವಿದ್ಯುತ್ ಕಡಿತದಿಂದ ಬೆಳೆಗಳು ಒಣಗುತ್ತಿವೆ. ಇದರಿಂದ ಆಕ್ರೋಶಗೊಂಡ ರೈತರು ದೊಡ್ಡಬಳ್ಳಾಪುರ ನಗರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರೈತರ ಪ್ರತಿಭಟನೆಯಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ಕೆ.ಮಥಾಯಿ ಭಾಗಿಯಾಗಿದ್ದರು. ಟ್ರಾನ್ಸ್ ಫಾರ್ಮ್ ಬದಲಾವಣೆಗೆ ಬೆಸ್ಕಾಂ ಅಧಿಕಾರಿಗಳು 5ಸಾವಿರ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಇದೇ ಸಮಯದಲ್ಲಿ ರೈತರು ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಎಇಇ ರೋಹಿತ್ ವಿದ್ಯುತ್ ಪೂರೈಕೆ ಮತ್ತು ಬೇಡಿಕೆಯಲ್ಲಿ ವ್ಯತ್ಯಾಸ ಇರುವುದರಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಮುಂದೇ ಪದೇಪದೇ ವಿದ್ಯುತ್ ಕಡಿತ ಮಾಡದೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಭರವಸೆ ನೀಡಿದರು.

Edited By :
Kshetra Samachara

Kshetra Samachara

19/04/2022 04:40 pm

Cinque Terre

5.92 K

Cinque Terre

0

ಸಂಬಂಧಿತ ಸುದ್ದಿ