ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿಗೆ ವ್ಯಕ್ತಿ ಬಲಿ

ಬೆಂಗಳೂರು: ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದೆ. ಪದೆ ಪದೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವು ನೋವು ಸಂಭವಿಸುತ್ತಿದ್ರು ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತೆ ಕಾಣುತ್ತಿದೆ.

ಇಂದು ಕೂಡ 27ವರ್ಷ ವಯಸ್ಸಿನ ಕಿಶೋರ್ ಎಂಬಾತ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಪಾರ್ಕ್ ಬಳಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಿಶೋರ್ ಸಾವನ್ನಪ್ಪಿದ್ದಾನೆ. ಸದ್ಯ ಯುವಕನ ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಂಜಯ್ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.

Edited By :
Kshetra Samachara

Kshetra Samachara

26/04/2022 08:55 am

Cinque Terre

5.87 K

Cinque Terre

0

ಸಂಬಂಧಿತ ಸುದ್ದಿ