ವರದಿ: ಗಣೇಶ್ ಹೆಗಡೆ
ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ 3 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡುತ್ತಿದ್ದಾರೆ. ಹಾಲಿನ ದರ 3 ರೂ. ಹೆಚ್ಚಳದಲ್ಲಿ 2 ರೂ. ರೈತರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿರುವ ಕೆಎಂಫ್. ಸಾಧಕ ಬಾಧಕ ನೋಡಿ ಬಳಿಕ ನಿರ್ಧಾರ ತಗೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಜತೆ ಮಾತನಾಡಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅವರು, 2020ರ ಬಳಿಕ ಹಾಲಿನ ದರ ಏರಿಕೆ ಆಗಿಲ್ಲ. ಬೇರೆ ರಾಜ್ಯದಲ್ಲಿ ಹೋಲಿಸಿದರೆ ನಮ್ಮ ಹಾಲಿನ ದರ ಸರಾಸರಿ 5-10 ರೂ. ಕಡಿಮೆ ಇದೆ. 2 ರೂ. ದರ ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.
PublicNext
27/04/2022 10:41 am