ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯ ಹಾಗೂ ಪೂರ್ವ ವಲಯ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ನಿನ್ನೆ ರಾತ್ರಿ ಸಂಭಂದಪಟ್ಟ ಇಂಜಿನಿಯರ್‌ಗಳ ಜೊತೆ ತಪಾಸಣೆ ನಡೆಸಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
ಶೇಷಾದ್ರಿ ರಸ್ತೆ ಯಲ್ಲಿ ಮೌರ್ಯ ಹೋಟಲ್ ಜಂಕ್ಷನ್ ನಿಂದ ಕೆ.ಆರ್ ವೃತ್ತದವರೆಗೆ ಒಟ್ಟು 1.2 ಕಿ.ಮೀ ಉದ್ದದ ರಸ್ತೆಯಲ್ಲಿ 6 ಪಥದ ವೈಟ್ ಟಾಂಪಿಗ್ ಕಾಮಗಾರಿ ಪರಿಶೀಲನೆ ನಡೆಸಿ, ನಿಗದಿತ ಅವಧಿಯೊಳಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್ ಅವರಿಗೆ ಸೂಚಿಸಿದರು.
ಅವೆನ್ಯೂ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಸುಲ್ತಾನ್ ಪೇಟೆ, ಚಿಕ್ಕಪೇಟೆ ಮೆಟ್ರೋ ರೈಲು ನಿಲ್ದಾಣ, ಕೆಂಪೇಗೌಡ ರಸ್ತೆ ಯಲ್ಲಿ ನಡೆಯುತ್ತಿರುವ ವಿವಿಧ ಕಾಮಗರಿಗಳ ಪರಿಶೀಲನೆ ನಡೆಸಿ, ರಾತ್ರಿ ವೇಳೆ ವಾಹನಗಳ ಸಂಚಾರ ವಿಳರವಾಗಿರಲಿದ್ದು, ಈ ವೇಳೆ ಅವಶ್ಯಕ ವಿದ್ಯುತ್ ದೀಪಗಳನ್ನು ಅಳವಡಿಸಿಕೊಂಡು ಕಾಮಗಾರಿ ಕಾರ್ಯಕ್ಕೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿಕೊಂಡು ತ್ವರಿತವಾಗಿ ಕಾರ್ಯನಿರ್ವಹಿಸಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸದಾಶಿವನಗರದ ಬಾಷ್ಯಂ ವೃತ್ತದ ಬಳಿ ಸ್ಯಾಂಕಿ ಟ್ಯಾಂಕ್ ದಡದ ಬಳಿಯ ರಸ್ತೆಯಲ್ಲಿ ನಡೆಯುತ್ತಿರುವ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
ಮಂತ್ರಿ ಮಾಲ್ ಬಳಿಯಿಂದ ಯಶವಂತಪುರ ಜಂಕ್ಷನ್ ವರೆಗೆ ಕೈಗೆತ್ತಿಕೊಂಡಿರುವ ವೈಟ್ ಟಾಂಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಈಗಾಗಲೇ ಮಂತ್ರಿ ಮಾಲ್ ನಿಂದ ಸರ್ಕಲ್ ಮಾರಮ್ಮ ಜಂಕ್ಷನ್ ರವರೆಗೆ ಬುಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ, ಜಲಮಂಡಳಿ, ಬೆಸ್ಕಾಂ, ಓ.ಎಫ್.ಸಿ ಕೇಬಲ್ ಅಳವಡಿಕೆಗೆ ಡಕ್ಟ್ ಅಳವಡಿಕೆ ಸೇರಿದಂತೆ ಇನ್ನಿತರೆ ಮೂಲ ಸೌಲಭ್ಯಗಳ ಅಳವಡಿಕೆಯ ಕಾಮಗಾರಿ ಪ್ರಗತಿಯಲ್ಲಿದೆ. 15 ದಿನದೊಳಗಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸ್ಥಳೀಯರಿಗೆ ಯಾವುದೇ ಸಮಸ್ಯೆ ಆಗದಂತೆ ಬಾಕಿ ಕಾಮಗಾರಿಯನ್ನು ತ್ವರಿಯವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಮಹಲ್ ರಸ್ತೆಯ ದೂರದರ್ಶನ ಕೇಂದ್ರದ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿವೀಕ್ಷಿಸಿ, ಸದರಿ ಸ್ಥಳದಲ್ಲಿ ದೊಡ್ಡಗಾತ್ರದ ಪೈಪ್ ಅಳವಡಿಸಿ ಆ ಮುಖಾಂತರ ನೀರು ಸರಾಗವಾಗಿ ಹರಿಯಲು ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ತದನಂತರ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಹಿಂಬಾಂಗದ ರಸ್ತೆ ಅಭಿವೃದ್ಧಿ ಪಡಿಸಿರುವುದನ್ನು ಪರೀಶೀಲನೆ ನಡೆಸಿದರು.
Kshetra Samachara
30/04/2022 02:47 pm