ಅನೇಕಲ್ : ಹೊರ ಗುತ್ತಿಗೆ ನೌಕರರನ್ನ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಹಾಗೂ ಪುರಸಭೆಯ ಪೌರ ಕಾರ್ಮಿಕರು, ಡೇಟಾ ಆಪರೇಟರ್, ವಾಟರ್ ಮ್ಯಾನ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೇವರಕೊಂಡಪ್ಪ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು, ವಾಹನ ಚಾಲಕರು, ವಾಟರ್ ಮ್ಯಾನ್, ಕಸ ನಿರ್ವಹಣೆ ಸಹಾಯಕರು ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳನ್ನ ನೇರ ನೇಮಕಾತಿ ಯನ್ನು ಮಾಡಲು ರಾಜ್ಯ ಸರ್ಕಾರಗಳಿಗೆ ಹಲವು ಬಾರಿ ಆಗ್ರಹಿಸಿದ್ದೇವೆ ಆದರೆ ಇದುವರೆಗೂ ಕೂಡ ಗುತ್ತಿಗೆ ಆಧಾರದ ಮೇಲೆ ನಮ್ಮನ್ನು ದುಡಿಸಿಕೊಳ್ಳುತ್ತಿದ್ದಾರೆ.
ಕೇವಲ ಮಕ್ಕಳ ಶಿಕ್ಷಣಕ್ಕೆ ಸಾಕಾಗುಷ್ಟು ಸಂಬಳ ನೀಡುತ್ತಿದ್ದಾರೆ ಇತರರಿಗೆ ನೀಡುವ ಸರ್ಕಾರಿ ಸೌಲಭ್ಯಗಳನ್ನ ನಮಗೂ ನೀಡಿ ಎಂದು ಆಗ್ರಹಿಸಿದರು.
PublicNext
19/05/2022 09:59 pm