ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಪೆಟ್ರೋಲ್, ಡಿಸೇಲ್ ವ್ಯತ್ಯಯ ಸಾಧ್ಯತೆ.!

ಬೆಂಗಳೂರು: ವಾಹನ ಸವಾರರೇ ತಕ್ಷಣವೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಭರ್ತಿ ಮಾಡಿಕೊಳ್ಳಿ, ಯಾಕೆಂದರೆ ನಾಳೆ ಪೆಟ್ರೋಲ್ ಬಂಕ್‌ಗಳಲ್ಲಿ ತೈಲ ಸಿಗದಿರಬಹುದು.

ಏಕೆಂದರೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟಗಾರರ ಒಕ್ಕೂಟವು ಮಂಗಳವಾರ ಮೇ.31 ರಂದು ಡಿಪೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

2017 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ 1 ರೂ ಕಮಿಷನ್ ನೀಡಬೇಕೆಂಬುದು ಫೆಡರೇಷನ್ ಪ್ರಮುಖ ಬೇಡಿಕೆ ಇಟ್ಟಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಲ್ಲ. ಹೀಗಾಗಿ ವಿಧಿಯಿಲ್ಲದೆ ತೈಲ ಡಿಪೋಗಳಿಂದ ಇಂಧನ ಖರೀದಿ ಮಾಡದೆ ಪ್ರತಿಭಟನೆ ಮಾಡುತ್ತೇವೆ ಎಂದು ಫೆಡರೇಷನ್ ತಿಳಿಸಿದೆ.

2011 ರಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದಿಗೆ ಹೋಲಿಕೆ ಮಾಡಿದರೆ ದ್ವಿಗುಣವಾಗಿದೆ, ಕಮಿಷನ್ ಹೆಚ್ಚಳ ಮಾಡಬೇಕೆಂದು ಕೇಂದ್ರ, ಪೆಟ್ರೋಲಿಯಂ ಸಚಿವರಿಗೆ ಹಾಗೂ ರಾಜ್ಯದ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಬೇಕೆಂಬ ಕಾರಣಕ್ಕಾಗಿಯೇ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದೆ.

ಬಂಕ್ ನೆಡೆಸುವುದು ದುಸ್ತರ:

ಬಂಕ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. ಅಲ್ಲದೆ ಕಂಪೆನಿಗಳ ಡೀಲರ್ ಗಳು ಬಂಕ್‌ಗಳಲ್ಲಿ ಸಿಬ್ಬಂದಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸೂಚನೆ ನೀಡಿದೆ. ಶೌಚಾಲಯ, ತಿಂಡಿ, ಊಟದ ವ್ಯವಸ್ಥೆ ಶುಚಿತ್ವ ಹೀಗೆ ಎಲ್ಲವನ್ನೂ ನಿರ್ವಹಿಸಬೇಕಾಗಿರುವುದರಿಂದ ಬಂಕ್ ಗಳನ್ನು ನಡೆಸುವುದೇ ದುಸ್ತರವಾಗಿದೆ ಎಂದಿದೆ.

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲ:

ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಐದು ವರ್ಷವಾದರೂ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ. ಕೇಂದ್ರ ಸರ್ಕಾರ ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಪ್ರತಿ ದಿನ ಲೀಟರ್‌ಗೆ ಪೈಸೆಗಳಲ್ಲಿ ಏರಿಕೆ ಮಾಡಿದ್ದರು. ಆದರೆ, ಕಳೆದ ವಾರ ಇದ್ದಕ್ಕಿದ್ದಂತೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಸುಮಾರು 10 ರೂ. ಕಡಿತ ಮಾಡಿತು. ಇದರಿಂದ ಪ್ರತಿಯೊಂದು ಬಂಕ್‌ಗಳಿಗೆ ಕನಿಷ್ಠ 5ರಿಂದ 25 ಲಕ್ಷವರೆಗೂ ನಷ್ಟವಾಗುತ್ತಿದೆ. ಮೊದಲೇ ಸಂಕಷ್ಟದಲ್ಲಿರುವ ನಮಗೆ ಕೇಂದ್ರ ಸರ್ಕಾರ ಯರ ಮೇಲೆ ಬರೆ ಎಳೆದಿದೆ ಎಂದು ಫೆಡರೇಷನ್ ಹೇಳಿದೆ.

Edited By : Vijay Kumar
Kshetra Samachara

Kshetra Samachara

30/05/2022 05:44 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ