ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶೇಷಾದ್ರಿಪುರ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಬಹುತೇಕ ಪೂರ್ಣ: ಬಿಬಿಎಂಪಿ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು ಹೃದಯ ಭಾಗವಾದ ಶೇಷಾದ್ರಿಪುರ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣ ಆಗಲಿದ್ದು, ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇನ್ನು ಈ ಬಗ್ಗೆ ಮಾತನಾಡಿದ ಪಾಲಿಕೆ ವಿಶೇಷ ಆಯುಕ್ತ ರವೀಂದ್ರ, 1.2 ಕಿ ಮೀ. ಉದ್ದದ ರಸ್ತೆಯನ್ನು 16.63 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಅದರಂತೆ, ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು 8 ಹಂತಗಳಲ್ಲಿ ವೈಟ್ ಟಾಪಿಂಗ್ ಮಾಡಲಾಗಿದೆ. ಈಗ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ 10 ದಿನಗಳಲ್ಲಿ ಗ್ರೌಂಡ್ ಕೆಲಸ ಮುಗಿಸಿ ನಂತರದ ದಿನಗಳಲ್ಲಿ ಸಿವಿಲ್ ಕೆಲಸಗಳನ್ನು ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

Edited By :
PublicNext

PublicNext

31/05/2022 05:48 pm

Cinque Terre

26.35 K

Cinque Terre

0

ಸಂಬಂಧಿತ ಸುದ್ದಿ