ಬೆಂಗಳೂರು: ಬೆಂಗಳೂರು ನಗರದ ಕಟ್ಟಡ ಮತ್ತಿತರ ನಿರ್ಮಾಣ ಕೆಲಸದ ಕಾರ್ಮಿಕರಿಗೆ ಉಚಿತವಾಗಿದ್ದ ಸಹಾಯಹಸ್ತ ಪಾಸ್ ಗಳ ವಿತರಣೆ ಸ್ಥಗಿತಗೊಳಿಸಲು ಬಿಎಂಟಿಸಿ ನಿರ್ಧರಿಸಿದೆ!
ಈ ಬಗ್ಗೆ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಜೂನ್ 1 ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸೂಚಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ಸುಗಳಲ್ಲಿ ಪ್ರಯಾಣಿಸಲು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ನೀಡುವ ರಿಯಾಯಿತಿ ಬಸ್ ಪಾಸ್ ಇದಾಗಿದೆ. ಈ ಸೌಲಭ್ಯ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಲು ಈ ನಿಯಮದಡಿ ಅರ್ಹರಾಗಿರುತ್ತಾರೆ.
ನೋಂದಾಯಿತ ಫಲಾನುಭವಿಯ ಗುರುತಿನ ಚೀಟಿ, ಆಧಾರ್ ಕಾರ್ಡ್ ನೀಡಿ ಪಾಸ್ ಮಾಡಿಸಿಕೊಳ್ಳಬೇಕು. ಆದರೆ, ಇತ್ತೀಚೆಗೆ ಕಾರ್ಮಿಕರೆಂದು ಹೇಳಿಕೊಂಡು ಸಿಕ್ಕ ಸಿಕ್ಕವರೆಲ್ಲ ಸಹಾಯಹಸ್ತ ಪಾಸ್ಗಳನ್ನು ಪಡೆಯುತ್ತಿದ್ದಾರೆ.
ಇದರಿಂದ ನಿಜಕ್ಕೂ ಅಗತ್ಯವಿರುವ ಅರ್ಹ ಫಲಾನುಭವಿಗಳಿಗೆ ಬಸ್ ಪಾಸ್ ಸಿಗದಂತಾಗಿದೆ. ಹೀಗಾಗಿ ಬಿಎಂಟಿಸಿ ದಿಢೀರ್ ಸಹಾಯ ಹಸ್ತ ಪಾಸ್ ಸ್ಥಗಿತಕ್ಕೆ ಸೂಚಿಸಿದೆ ಎಂದು ಹೇಳಲಾಗ್ತಿದೆ.
Kshetra Samachara
31/05/2022 08:32 pm