ಬೆಂಗಳೂರು: ಬಿಬಿಎಂಪಿ ರಸ್ತೆಗಳನ್ನು ಗುಂಡಿ ಮುಕ್ತ ಗೊಳಿಸಲು ವಲಯವಾರು ಕೈಗೊಂಡಿರುವ ಕ್ರಮಗಳ ಬಗ್ಗೆ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಮುಖ್ಯ ರಸ್ತೆಗಳು, ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳನ್ನು ಮುಚ್ಚಲು ತ್ವರಿತ ಕ್ರಮ ಕೈಗೊಳ್ಳುವಂತೆ ಪಾಲಿಕೆಯ ಮುಖ್ಯ ಆಯುಕ್ತರು ಸೂಚಿಸಿದ್ದರು. ಎಲ್ಲ ರಸ್ತೆಗಳ ಗುಂಡಿ ಮುಚ್ಚುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ನಿರ್ದೇಶನ ನೀಡಿದ್ದರು.
ಆದರೂ ನಗರದ ರಸ್ತೆಯಲ್ಲಿ ಗುಂಡಿಗಳು ಪತ್ತೆಯಾಗುತ್ತಲೇ ಇದೆ. ಈ ಸಂಬಂಧ ಗುಂಡಿ ಮುಚ್ಚಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ವರ್ಷ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಇಬ್ಬರು ಇಂಜಿನಿಯರ್‌ಗಳ ವಿರುದ್ಧ ಮುಖ್ಯ ಆಯುಕ್ತರು ಕ್ರಮ ಕೈಗೊಂಡಿದ್ದರು. ಇದೀಗ ಮತ್ತೆ ಎಚ್ಚರಿಕೆ ನೀಡಲಾಗಿದೆ.
Kshetra Samachara
07/06/2022 07:12 pm