ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಗೊಂದಲದ ಗೂಡಾದ ಗ್ರಾಮ ಸಭೆ: ಅಧಿಕಾರಿಗಳಿಗೆ ಫುಲ್ ತರಾಟೆ!

ಆನೇಕಲ್:ಭೂಕಬಳಿಕೆದಾರರು ಪರ ನಿಂತಿದ್ದಾರೆ ಅಧಿಕಾರಿಗಳು ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಊರಿನ ಗ್ರಾಮಸ್ಥರು ತಿರುಗುಬಿದ್ದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ಗ್ರಾಮಸಭೆಯಲ್ಲಿ ನಡೆದಿದೆ.

ಹೌದು 2022 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯನ್ನು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿಂಗೆನ ಅಗ್ರಹರ ಗ್ರಾಮದಲ್ಲಿ ಗ್ರಾಮ ಸಭೆಯನ್ನು ಹಮ್ಮಿಕೊಂಡಿದ್ದು, ಖಾತೆ ಬದಲಾವಣೆ ವಿಚಾರದಲ್ಲಿ ಊರಿನ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದಿದ್ದಾರೆ. ಹೀಗಾಗಿ ಗ್ರಾಮಸಭೆ ಗೊಂದಲದ ಗೂಡಾಗಿ ಪರಿಣಮಿಸಿ ಕೆಲ ಗಂಟೆಗಳ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಜೊತೆಗೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಭೂಕಬಳಿಕೆದಾರರು ಪರ ಅಧಿಕಾರಿಗಳು ನಿಂತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದು ಉತ್ತರ ನೀಡುವಂತೆ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದರು. ಪರಿಸ್ಥಿತ ಅರಿತ ಪೋಲಿಸರು ನಿಯಂತ್ರಣವನ್ನು ಮಾಡಿದ್ದಾರೆ.

Edited By :
PublicNext

PublicNext

09/06/2022 08:57 pm

Cinque Terre

31.35 K

Cinque Terre

0

ಸಂಬಂಧಿತ ಸುದ್ದಿ