ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಂಟಿಸಿ ಪಾಸ್‌‌ ಮಾನ್ಯತಾ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪಿಯುಸಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 2021-22 ನೇ ಸಾಲಿನಲ್ಲಿ ರಿಯಾಯಿತಿ ದರದಲ್ಲಿ ಪಡೆದಿದ್ದ ಬಸ್ ಪಾಸ್ ಮಾನ್ಯತಾ ಅವಧಿಯನ್ನು ವಿಸ್ತರಣೆ ಮಾಡಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ಪಾವತಿ ರಶೀದಿ ಗುರುತಿನ ಚೀಟಿ ಯೊಂದಿಗೆ ಜೂನ್.30 ರವರೆಗೆ ಉಚಿತ ಪ್ರಯಾಣ ವಿದ್ಯಾರ್ಥಿಗಳು ಮಾಡಬಹುದು.‌ ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು, ವೃತ್ತಿ ಪರ ಪಿಹೆಚ್ ಡಿ ವಿದ್ಯಾರ್ಥಿಗಳು ಹಳೆಯ ಪಾಸ್ ನೊಂದಿಗೆ ಆ. 31 ರವೆಗೆ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Edited By : Nagaraj Tulugeri
Kshetra Samachara

Kshetra Samachara

14/06/2022 10:35 am

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ