ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಂ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ರಸ್ತೆ ಕಾಮಗಾರಿ ಕಳಪೆ-ಗುತ್ತಿಗೆದಾರ 3 ಲಕ್ಷ ದಂಡ?

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಭೇಟಿ ವೇಳೆ ನಗರದಲ್ಲಿ ನಿರ್ಮಿಸಲಾಗಿದ್ದ ರಸ್ತೆಯಲ್ಲಿ ಕಂಡು ಬಂದಿದ್ದ ಗುಂಡಿ ಸಂಬಂಧ ಗುತ್ತಿಗೆದಾರನಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯು 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಗುತ್ತಿಗೆದಾರ ರಮೇಶ್ ಎಂಬುವರಿಗೆ ಬಿಬಿಎಂಪಿ ದಂಡ ಹಾಕಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ರಾಜಧಾನಿಗೆ ಬಂದಾಗ ಅವರು ಸಂಚರಿಸುವ ರಸ್ತೆಗಳ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆದಿತ್ತು. ಆದರೆ ಪ್ರಧಾನಿ ಭೇಟಿ ಬಳಿಕ ಅದೇ ರಸ್ತೆಯಲ್ಲಿ ಗುಂಡಿಗಳು ಕಂಡುಬಂದಿದ್ದವು. ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿತ್ತು. ನಂತರ ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಸೂಚನೆ ನೀಡಲಾಗಿತ್ತು.

11.50 ಕೋಟಿ ರೂ. ವೆಚ್ಚದಲ್ಲಿ 9 ಕಿಲೋಮೀಟರ್ ರಸ್ತೆ ನಿರ್ಮಿಸಲಾಗಿದೆ. ಕಳಪೆ ಕಾಮಗಾರಿ ಮಾಡಿದ ಸಂಬಂಧ ಮೂವರು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ಶೋಕಾಸ್ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

Edited By :
Kshetra Samachara

Kshetra Samachara

25/06/2022 05:27 pm

Cinque Terre

2.71 K

Cinque Terre

0

ಸಂಬಂಧಿತ ಸುದ್ದಿ