ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುವ ಪುರಸಭೆ & ನಗರಸಭೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ 350 ರಿಂದ 400 ಜನ ಕಾರ್ಮಿಕರು ಇಂದು ಬೀದಿಗೆ ಬಿದ್ದಿದ್ದಾರೆ.
ಪೌರಾಡಳಿತ ಇಲಾಖೆಯ ವ್ಯಾಪ್ತಿಗೆ ಬರುವ ನಗರಸಭೆ & ಪುರಸಭೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಅರೆಗುತ್ತಿಗೆ ಕಾರ್ಮಿಕರು, UGD ನೌಕರರು, ನೀರುಗಂಟಿಗಳು ಕೆಲಸ ಖಾಯಂಗೊಳಿಸಿ ಎಂದು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಿಂಗಳಾದ್ರೂ ತಲೆಕೆಡಿಸಿಕೊಳ್ಳದ ಜಿಲ್ಲಾಡಳಿತದ ವಿರುದ್ದ ನೂರಾರು ಜನ ಕಾರ್ಮಿಕರು ಇಂದು ದೇವನಹಳ್ಳಿಯ ಬೀರಸಂದ್ರದ ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ್ರು.. ನಂತರ ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಬಂದ ಜಿಲ್ಲಾಧಿಕಾರಿ ಶ್ರೀನಿವಾಸ್, ಕಾರ್ಮಿಕರ ಮನವಿಯನ್ನ ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದರು. ಇದೇ ವೇಳೆ ಮಾತನಾಡಿದ ಹೋರಾಟಗಾರರು ನಮ್ಮ ಕೆಲಸ ಖಾಯಂಗೊಳಿಸೋವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್, ದೇವನಹಳ್ಳಿ..
Kshetra Samachara
01/07/2022 06:11 pm