ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಮುಂದೆ ಹೋಟೆಲ್‌ಗಳು ಸರ್ವಿಸ್ ಚಾರ್ಜ್ ವಿಧಿಸುವಂತಿಲ್ಲ: ಕೇಂದ್ರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್‌ಗಳು ಬಿಲ್‌ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

ದೂರುಗಳು ಹೆಚ್ಚುತ್ತಿರುವ ನಡುವೆ, ಅನ್ಯಾಯಯುತ ವ್ಯಾಪಾರ ಪದ್ಧತಿ ತಡೆಗೆ ಪ್ರಾಧಿಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳ ಪ್ರಕಾರ, ಹೋಟೆಲ್, ರೆಸ್ಟೋರೆಂಟ್ ಗಳು ಸ್ವಯಂ ಚಾಲಿತವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಅಥವಾ ಬಿಲ್ ನಲ್ಲಿಯೇ ಕಡಿತ ಮಾಡುವಂತಿಲ್ಲ. ಇತರ ಯಾವುದೇ ಹೆಸರಿನಲ್ಲಿ ಸೇವಾ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಹೇಳಲಾಗಿದೆ.

CCPA ಆದೇಶದ ಪ್ರಕಾರ, ಸೇವಾ ಶುಲ್ಕ ವಿಧಿಸುವ ಹೋಟೆಲ್‌ಗಳು ರೆಸ್ಟೋರೆಂಟ್‌ಗಳ ವಿರುದ್ಧ ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಸಂಖ್ಯೆ 1915 ರಲ್ಲಿ ದೂರುಗಳನ್ನು ಸಲ್ಲಿಸಬಹುದು ಎಂದು ಸಹ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸೇವಾ ಶುಲ್ಕದ ಸಂಗ್ರಹದ ಆಧಾರದ ಮೇಲೆ ಸೇವೆಗಳ ಪ್ರವೇಶ ಅಥವಾ ನಿಬಂಧನೆಗಳ ಮೇಲೆ ಯಾವುದೇ ನಿರ್ಬಂಧವನ್ನು ಗ್ರಾಹಕರ ಮೇಲೆ ವಿಧಿಸಲಾಗುವುದಿಲ್ಲ ಎಂದು ಮಾರ್ಗಸೂಚಿ ಹೇಳಿದೆ. ಇದಲ್ಲದೆ ಆಹಾರದ ಬಿಲ್‌ನೊಂದಿಗೆ ಸೇರಿಸಿ ಮತ್ತು ಒಟ್ಟು ಮೊತ್ತದ ಮೇಲೆ ಜಿಎಸ್‌ಟಿ ವಿಧಿಸುವ ಮೂಲಕ ಸೇವಾ ಶುಲ್ಕವನ್ನು ಸಂಗ್ರಹಿಸುವಂತಿಲ್ಲ ಎಂದು ಸಹ ಮಾರ್ಗಸೂಚಿಯಲ್ಲಿ ಉಲ್ಲೇಖವಾಗಿದೆ.

ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹೋಟೆಲ್ ಅಥವಾ ರೆಸ್ಟೊರೆಂಟ್ ಸೇವಾ ಶುಲ್ಕವನ್ನು ವಿಧಿಸುತ್ತಿದೆ ಎಂದು ಯಾವುದೇ ಗ್ರಾಹಕರು ಕಂಡುಕೊಂಡರೆ, ಬಿಲ್ ಮೊತ್ತದಿಂದ ಆ ಸೇವಾ ಶುಲ್ಕವನ್ನು ತೆಗೆದುಹಾಕಲು ಗ್ರಾಹಕರು ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.

Edited By : Vijay Kumar
PublicNext

PublicNext

05/07/2022 05:31 pm

Cinque Terre

44.79 K

Cinque Terre

0

ಸಂಬಂಧಿತ ಸುದ್ದಿ