ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಷ್ಟದ ಸುಳಿಯಲ್ಲಿರುವ ಸಾರಿಗೆ ನಿಗಮಗಳ ವಿಲೀನಕ್ಕೆ ಶಿಫಾರಸು..?

ವರದಿ - ಗಣೇಶ್ ಹೆಗಡೆ

ಬೆಂಗಳೂರು: ನಷ್ಟದ ಸುಳಿಯಲ್ಲಿ ಸಿಲುಕಿರುವ ರಾಜ್ಯದ ರಸ್ತೆ ಸಾರಿಗೆ ನಿಗಮಗಳನ್ನು ವಿಲೀನ ಮಾಡುವಂತೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಎಂ‌ ಆರ್ ಶ್ರೀನಿವಾಸ ಮೂರ್ತಿ ಅವರು, ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟುವುದು, ಸಂಪನ್ಮೂಲ ಸೃಜನೆಗೆ ಒತ್ತು ನೀಡುವುದು, ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವುದು, ನಾಲ್ಕೂ ಸಾರಿಗೆ ಸಂಸ್ಥೆಗಳ ಸುಸ್ಥಿರ ಕಾರ್ಯ ನಿರ್ವಹಣೆ ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ 131 ಪುಟಗಳ ಅಂತಿಮ ವರದಿ ಸಲ್ಲಿಕೆ ಮಾಡಿದರು.

ಸಾರಿಗೆ ನಿಗಮಗಳ ವಿಲೀನಕ್ಕೆ ಶಿಫಾರಸು.

ನಾಲ್ಕೂ ಸಾರಿಗೆ ನಿಗಮಗಳಿಗೆ ಮಧ್ಯವರ್ತಿ ಸಂಸ್ಥೆಯಿಂದ ಹಣಕಾಸು ಸಾಲ

ನಿಗಮಗಳು ತಮ್ಮ ಆದಾಯದಲ್ಲೇ ಮುಂದುವರೆಯುವಂತೆ ಮಾಡುವ ಬಗ್ಗೆ ಸಲಹೆ

ಸದ್ಯ ನಾಲ್ಕೂ ನಿಗಮಗಳ ಬಳಿ 24 ಸಾವಿರ ಬಸ್​​ಗಳಿವೆ.

ಒಂದು ಬಸ್ ಗೆ ಚಾಲಕ ಮಾತ್ರ ಸಾಕು. ಚಾಲಕನೇ ನಿರ್ವಾಹಕನ ಕೆಲಸ ಮಾಡುವಂತಿರಬೇಕು

ಬಸ್​​​ಗಳನ್ನು ಸ್ಟಾಪ್ ಟು ಸ್ಟಾಪ್ ಮಾತ್ರ ನಿಲ್ಲಿಸುವಂತಿರಬೇಕು

ಇದೇ ರೀತಿಯ ಹಲವು ಶಿಫಾರಸನ್ನು ವರದಿಯಲ್ಲಿ ನೀಡಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಾರ್ಯದರ್ಶಿ ಜಯರಾಂ ರಾಯಪುರ, ಸಾರಿಗೆ ಇಲಾಖೆ ಕಾರ್ಯದರ್ಶಿ ಪ್ರಸಾದ್, ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಇದ್ದರು.‌

Edited By : Nagaraj Tulugeri
PublicNext

PublicNext

19/07/2022 10:43 pm

Cinque Terre

18.3 K

Cinque Terre

2

ಸಂಬಂಧಿತ ಸುದ್ದಿ