ಬೆಂಗಳೂರು : ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಇನ್ನು ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಲು ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ SDRF ಹಾಗೂ Fire Department ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೇ ಪತ್ರ ಬರೆಯಬೇಕೆಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಗಣೇಶ ವಿಸರ್ಜನಾ ಸ್ಥಳದಲ್ಲಿ ಭದ್ರತಾ ದೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು,ಮಾರ್ಷಲ್ ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಬಿಬಿಎಂಪಿಯಿಂದ ಮಾಡಲಾದೆ.
Kshetra Samachara
26/08/2022 08:07 pm