ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಗಸ್ಟ್ 01ರಂದು ಭಾರತಾದ್ಯಂತ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದನ್ನು ಕಾರ್ಯರೂಪಕ್ಕೆ ತರಲಾಗಿರುತ್ತದೆ. ಹಾಗೂ ಸೆಪ್ಟಂಬರ್ 04 ಮತ್ತು 18 ರಂದು ವಾರದ ಮೊದಲನೇ ಭಾನುವಾರ ಮತ್ತು ಮೂರನೇ ಭಾನುವಾರಗಳಂದು ಜಿಲ್ಲಾ ಚುನಾವಣಾಧಿಕಾರಿ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಟ್ಟೆಗಳಲ್ಲಿ ಸ್ವಯಂ ಪ್ರೇರಿತ ಆಧಾರ್ ಜೋಡಣೆ ವಿಶೇಷ ಅಭಿಯಾನ ಸಮಯ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ರವರಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದೆ .
ಇದರ ಸದುಪಯೋಗವನ್ನು ಸಾರ್ವಜನಿಕರು ಹಾಗೂ ಮತದಾರರು ಪಡೆದುಕೊಳ್ಳಲು ಅಪರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ವಿಶೇಷ ಆಯುಕ್ತರಾದ ರಂಗಪ್ಪ ಮನವಿ ಮಾಡಿದ್ದಾರೆ.
Kshetra Samachara
03/09/2022 10:50 pm