ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಫುಟ್‌ಪಾತ್ ಮೇಲೆ ವೈದ್ಯಕೀಯ ತ್ಯಾಜ್ಯ ಸುರಿದ ಕಿಡಿಗೇಡಿಗಳು

ಬೆಂಗಳೂರು: ಫುಟ್‌ಪಾತ್ ಮೇಲೆ ವೈದ್ಯಕೀಯ ತ್ಯಾಜ್ಯ ಸುರಿದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ರಾತ್ರಿಯ ವೇಳೆ ಕಿಡಿಗೇಡಿಗಳು ಬಂದು ಫುಟ್ ಪಾತ್ ಮೇಲೆ ವೈದ್ಯಕೀಯ ತ್ಯಾಜ್ಯ ಸುರಿದು ಹೋಗಿದ್ದಾರೆ. ಬೆಳಗ್ಗೆ ಎದ್ದು ನಿವಾಸಿಗಳು ವಾಕಿಂಗ್‌ಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್ ಎರಡನೇ ಹಂತದ 31ನೇ ಮುಖ್ಯರಸ್ತೆಯಲ್ಲಿ ಫುಟ್ ಪಾತ್ ಮೇಲೆ ವೈದ್ಯಕೀಯ ತ್ಯಾಜ್ಯ ಸುರಿಯಲಾಗಿದೆ.

ಫುಟ್‌ಪಾತ್ ಮೇಲೆ ಇಂಜೆಕ್ಷನ್ ಬಾಟಲ್‌ಗಳನ್ನು ಸಾಲಾಗಿ ಸುರಿದಿದ್ದಾರೆ. ಮತ್ತು ರೋಗಿಗಳಿಗೆ ಉಪಯೋಗಿಸಿದ ಸಿರಿಂಜ್ ಮತ್ತು ಇಂಜೆಕ್ಷನ್ ಗಳನ್ನು ಕೂಡ ಫುಟ್‌ಪಾತ್ ಮೇಲೆ ಸುರಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಗಾಬರಿಗೊಂಡಿದ್ದಾರೆ. ಕೂಡಲೇ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಫುಟ್‌ಪಾತ್ ನ ಮೇಲೆ ವೈದ್ಯಕೀಯ ತ್ಯಾಜ್ಯ ಸುರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By :
PublicNext

PublicNext

24/08/2022 10:31 am

Cinque Terre

22.34 K

Cinque Terre

0

ಸಂಬಂಧಿತ ಸುದ್ದಿ