#ಚಿಕ್ಕಬಳ್ಳಾಪುರ:-
ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವರಾದ ಅರಗಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಜನತೆ ಉಪಸ್ಥಿತರಿದ್ದರು..
PublicNext
01/04/2022 04:01 pm