ದೇವನಹಳ್ಳಿ: ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ನಿನ್ನೆ ಮತ್ತು ಇಂದು ದೇವನಹಳ್ಳಿಯ ಆಕಾಶ್ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಅಂತರಾಷ್ಟ್ರೀಯ ಸೌಲಭ್ಯಗಳುಳ್ಳ ಆಕಾಶ್ ಆಸ್ಪತ್ರೆಯಲ್ಲಿ ನೂರಾರು ಜನ ಸೈನಿಕರು ಹಾಗೂ ದೇವನಹಳ್ಳಿ ಪುರಸಭೆಯ ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುವ ನೂರಾರು ಜನ ಕಾರ್ಯಕರ್ತರು ಆರೋಗ್ಯ ತಪಾಸಣೆಗೆ ಒಳಪಟ್ಟರು.
ದೇವನಹಳ್ಳಿ ಸುತ್ತಮುತ್ತಲ ಹತ್ತಾರು ಹಳ್ಳಿಗಳ ನೂರಾರು ಜನ ಹಾಗೂ ಕಾರ್ಮಿಕರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಎಲ್ಲಾ ಜನತೆ ಆರೋಗ್ಯವಾಗಿರಬೇಕು ಎಂಬ ಉದ್ದೇಶದಿಂದ ಈ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ ಅಂತಾರೆ ಅಕಾಶ್ ಆಸ್ಪತ್ರೆಯ RMO Dr.ಹೆಗಡೆ.
SureshBabu Public Next ದೇವನಹಳ್ಳಿ..
Kshetra Samachara
08/04/2022 03:54 pm