ಬೆಂಗಳೂರು: 6-12 ವರ್ಷದ ಮಕ್ಕಳಿಗೆ ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಡ್ರೈ ಆರಂಭ ಮಾಡುತ್ತೇವೆ. 6-12 ವರ್ಷದ ಮಕ್ಕಳಿಗೆ ಶೀಘ್ರದಲ್ಲಿ ಲಸಿಕೆ ನೀಡುವ ವಿಚಾರವಾಗಿ ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೇಸಿಗೆ ರಜೆ ಪ್ರಾರಂಭ ಆಗಿದೆ. ಹೀಗಾಗಿ ಶಾಲೆಯಲ್ಲಿ ಮಾಡಬೇಕಾ? ಆಯಾ ಇನ್‍ಸ್ಟಿಟ್ಯೂಷನ್‍ನಲ್ಲಿ ಮಾಡಬೇಕಾ ಎಂದು ಚರ್ಚೆ ಮಾಡುತ್ತೇವೆ. ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. 6-12 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಲಸಿಕೆ ಉಚಿತ ನೀಡುವ ಬಗ್ಗೆ ನಿರ್ಧರಿಸುತ್ತೇವೆ ಎಂದರು.
ಬೆಂಗಳೂರಿನಲ್ಲಿ ಕೇಸ್ ದಿನೇ ದಿನೇ ಹೆಚ್ಚಳ ಆಗುತ್ತಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ದೊಡ್ಡ ಮಟ್ಟದ ಕೇಸ್ ಹೆಚ್ಚಳ ಆಗಿಲ್ಲ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
PublicNext
29/04/2022 04:28 pm