ಆನೇಕಲ್: ಕೊರೋನಾ ಸಂದರ್ಭದಲ್ಲಿ ವೈದ್ಯರು ಕೂಡ ಚಿಕಿತ್ಸೆಯನ್ನು ಕೊಡದೆ ಹಿಂದೆಟು ಹಾಕಿದ್ರು. ಆದ್ರೆ ಅಶಾ ಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗನ್ನು ತೊರೆದು ಲಕ್ಷಾಂತರ ಜೀವಗಳನ್ನ ಉಳಿಸುವ ಪ್ರಯತ್ನಗಳನ್ನು ಮಾಡಿದ್ದಾರೆ ಅವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಬೆಂಗಳೂರು ಲೋಕಸಭಾ ಸದಸ್ಯ ಡಿಕೆ ಸುರೇಶ್ ತಿಳಿಸಿದರು..
ಸರ್ಜಾಪುರ ಅಂಬೇಡ್ಕರ್ ಮೈದಾನದಲ್ಲಿ ಹಮ್ಮಿಕೊಂಡಿದ್ದ 75ನೇ ವರ್ಷದ ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ತಾಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು..ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆಡಳಿತ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇನ್ನು ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಡಿಕೆ ಸುರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು..
ಇನ್ನು ಇದೇ ವೇಳೆ ಮಾತನಾಡಿದ ಲೋಕಸಭಾ ಸದಸ್ಯ ಡಿಕೆ ಸುರೇಶ್ ಇಡೀ ದೇಶಾದ್ಯಂತ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ..ಇದೇ ತಿಂಗಳು 18 ನೇ ತಾರೀಖಿನಿಂದ 30ನೇ ತಾರೀಖಿನವರೆಗೂ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಶಿಬಿರಗಳನ್ನ ಅಯೋಜನೆ ಮಾಡಲಾಗಿದೆ . ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ದೃಷ್ಟಿಯಿಂದ ಜನರಿಗೆ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಹೀಗಾಗಿ ಎಲ್ಲರೂ ಕೂಡ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು ..
ಹರೀಶ್ ಗೌತಮನಂದ, ಪಬ್ಲಿಕ್ ನೆಕ್ಸ್ಟ್, ಆನೇಕಲ್
Kshetra Samachara
18/04/2022 08:37 pm