ಮಲ್ಲೇಶ್ವರ: ನಗರದ ನಾಲ್ಕು ದಿಕ್ಕುಗಳಲ್ಲೂ ನಾಲ್ಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯದಲ್ಲಿ 430 ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಇದರ ಜತೆಗೆ 243 ವಾರ್ಡುಗಳಲ್ಲೂ 'ನಮ್ಮ ಕ್ಲಿನಿಕ್' ಆಸ್ಪತ್ರೆಗಳನ್ನು ನವೆಂಬರ್ ಹೊತ್ತಿಗೆ ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲ್ಲೇಶ್ವರಂನಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ವತಿಯಿಂದ ನಿರ್ಮಿಸಿರುವ ತಲಾ 50 ಹಾಸಿಗೆಗಳ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆ.ಸಿ. ಜನರಲ್ ಆಸ್ಪತ್ರೆಯ ಆವರಣದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಮತ್ತು 50 ಹಾಸಿಗೆಗಳ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಈ ಆಸ್ಪತ್ರೆಯು ವಿಕ್ಟೋರಿಯಾ ಆಸ್ಪತ್ರೆಯಂತೆ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ ಎಂದರು.
ಶ್ರವಣ ದೋಷವಿರುವ ಬಡವರಿಗೆ ಕಾಕ್ಲಿಯರ್ ಶಸ್ತ್ರಚಿಕಿತ್ಸೆಗೆ ನೆರವಾಗಲು ಸರಕಾರವು 500 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಜತೆಗೆ, ಪ್ರತಿದಿನ 60 ಸಾವಿರ ಜನರಿಗೆ ಡಯಾಲಿಸಿಸ್ ಚಿಕಿತ್ಸೆಗೆ ನೆರವು ನೀಡಲಾಗುತ್ತಿದೆ ಎಂದರು.
PublicNext
06/10/2022 05:14 pm