ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಿರಿಯ ಅಧಿಕಾರಿಗಳಿಂದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ: ಮೇಲಾಧಿಕಾರಿಗಳಿಗೆ ದೂರು!

ಆನೇಕಲ್ :ಕೆಲಸ ಮಾಡುವ ಜಾಗದಲ್ಲಿ ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದು ಜತಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಮಹಿಳೆಯೊಬ್ಬರು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬಳಿ ನಡೆದಿದೆ.

ಮಮತಾ ಅನ್ಯಾಯಕ್ಕೊಳಗಾಗಿದ್ದ ಮಹಿಳೆ

ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕೆಎಸ್ಆರ್ಟಿಸಿ ಡಿಪೋ ನಲ್ಲಿ ಮಮತಾ ಎಂಬಾಕೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅದೇ ಜಾಗದಲ್ಲಿ ಹಿರಿಯ ಅಧಿಕಾರಿಗಳಾದ ಡಿಎಂಇ ಚಿನ್ನ ಚುಂಚಯ್ಯ ಹಾಗೂ ಗುರು ಶಾಂತ ಇಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಆರೋಪ ಕೇಳಿ ಬಂದಿದೆ.

ಅಲ್ಲದೆ ಗಂಡ ಬೈರೇಶ್ ಸತ್ತು ಅನುಕಂಪದ ಆಧಾರದ ಮೇಲೆ ಈಕಗೆ ಆನೇಕಲ್ನ ಕೆಎಸ್ಆರ್ಟಿಸಿ ಡಿಪೋದಲ್ಲಿ ಕೆಲಸವನ್ನು ನೀಡಿದರು.ಆದರೆ ಈ ಜಾಗದಲ್ಲಿ ಮತ್ತೆ ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಅಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಆನೇಕಲ್ ಡಿಪೋದಲ್ಲಿ ಮಮತಾ ಸಂಬಂಧಿಗಳು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ.ಶೀಘ್ರವೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಸಿಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್

Edited By : PublicNext Desk
Kshetra Samachara

Kshetra Samachara

11/06/2022 05:00 pm

Cinque Terre

3.4 K

Cinque Terre

0

ಸಂಬಂಧಿತ ಸುದ್ದಿ