ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗುಂಡಿ ಮುಚ್ಚುವ ವಿಚಾರದಲ್ಲಿ ಹೈಕೋರ್ಟ್ ಗರಂ

ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಮರ್ಪಕ ಕ್ರಮಗಳನ್ನು ಕೈಗೊಳ್ಳದ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಮತ್ತೆ ಕಿಡಿಕಾರಿದೆ.

ನ್ಯಾಯಲಯಗಳ ಆದೇಶವನ್ನು ಬಿಬಿಎಂಪಿ ಪಾಲಿಸುತ್ತಿಲ್ಲ. ಪಾಲಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಮಳೆಗಾಲ ಶುರುವಾದರೂ ರಸ್ತೆ ಗುಂಡಿ ಸರಿಪಡಿಸಿಲ್ಲ. ಇನ್ನು ಬಿಬಿಎಂಪಿ ಸಬೂಬು ಒಪ್ಪ ಲು ಸಾಧ್ಯವಿಲ್ಲ. ಅಧಿಕಾರಿಗಳ ವಿರುದ್ಧ ನ್ಯಾಯಾಂಗ್ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂ. 6 ಕ್ಕೆ ಮುಂದೂಡಿತು. ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿದ್ದ ಪಿಐಎಲ್ ಕುರಿತು ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಅಶೋಕ್ ಕಿಣಗಿ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಯುತ್ತಿದೆ.

Edited By : Nagaraj Tulugeri
Kshetra Samachara

Kshetra Samachara

01/06/2022 09:50 am

Cinque Terre

1.51 K

Cinque Terre

0

ಸಂಬಂಧಿತ ಸುದ್ದಿ