ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟ್ಟಡ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ಕಸಿದುಕೊಂಡ ಆ ಇಲಾಖೆ!

ಬೆಂಗಳೂರು: ಬೆಂಗಳೂರು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದ ಕಾರ್ಮಿಕರಿಗೆ ಉಚಿತವಾಗಿ ಸಹಾಯಹಸ್ತ ಪಾಸುಗಳ ವಿತರಣೆಯನ್ನ ಬಿಎಂಟಿಸಿ ಸ್ಥಗಿತಗೊಳಿಸಲು ಈಗ ಪ್ರಮುಖ ಕಾರಣವೂ ಇದೆ.

ಹೌದು.ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯಿಂದ, ಕಳೆದ ಡಿಸೆಂಬರ್‌ನಿಂದ ಇಲ್ಲಿಯವರೆಗೆ ಅಂದ್ರೆ ಐದು ತಿಂಗಳಿಂದ 40 ಕೋಟಿ ಹಣ ಬಾಕಿ ಇರಿಸಿಕೊಂಡಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಬಸ್ಸುಗಳಲ್ಲಿ ಪ್ರಯಾಣಿಸಲು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ನೀಡುವ ರಿಯಾಯಿತಿ ಬಸ್ ಪಾಸ್ ಇದಾಗಿದೆ. ಈ ಸೌಲಭ್ಯವು ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಯಂ ಆಗಿ ವಾಸವಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಕೆಲಸದ ಸ್ಥಳಕ್ಕೆ ಪ್ರಯಾಣಿಸಲು ಬಿಎಂಟಿಸಿ ಬಸ್ ಪಾಸ್ ಪಡೆಯಲು ಈ ನಿಯಮದಡಿ ಅರ್ಹರಾಗಿರುತ್ತಾರೆ.

ಆದರೆ ಪ್ರತಿ ತಿಂಗಳು 8 ಕೋಟಿ ರೂ. ನಂತೆ 40 ಕೋಟಿ ರೂ. ವನ್ನು ಬಿಎಂಟಿಸಿ ಸಂಸ್ಥೆಗೆ ನೀಡಬೇಕಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಅಂತಾರೆ ಬಿಎಂಟಿಸಿ ಅಧಿಕಾರಿಗಳು.

ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಜೂನ್ 1 ರಿಂದ ಜಾರಿಗೆ ಬರುವಂತೆ ಪಾಸ್ ಸ್ಥಗಿತ ಗೊಳಿಸಲು ಸೂಚಿಸಿದ್ದಾರೆ. ಇದು ಬಿಎಂಟಿಸಿ ಅಧಿಕಾರಿಗಳ ಮೇಲೆ ಕೆಟ್ಟ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಆದರೆ ವಾಸ್ತವ ಮಾತ್ರ ಬೇರೆನೇ ಇದ್ದು, ಕೋಟಿ - ಕೋಟಿ ಬಾಕಿ ಮೊತ್ತ ಬಾರದ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಕ್ರಮಕ್ಕೆ ಮುಂದಾಗಿರೋದು ಮಾತ್ರ ಕಟು ಸತ್ಯ.

Edited By : Somashekar
Kshetra Samachara

Kshetra Samachara

01/06/2022 10:26 pm

Cinque Terre

5.04 K

Cinque Terre

0

ಸಂಬಂಧಿತ ಸುದ್ದಿ