ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಅನ್ನೋದಕ್ಕೆ ಸಿದ್ದವಾಗಿದೆ ದಾಖಲೆ?

ವರದಿ - ಗಣೇಶ್ ಹೆಗಡೆ

ಬೆಂಗಳೂರು:ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ತೆರೆ ಎಳೆಯಲು ಸರ್ಕಾರ ನಿರ್ಧರಿಸಿ ದಂತಿದೆ.ಈ ಸಂಬಂಧ ಸಿಎಂ ಬೊಮ್ಮಾಯಿ ರವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ ರವರ ಜತೆ ಸಮಾಲೋಚನೆ ನಡೆಸಿದ್ದಾರೆ.

ದಾಖಲೆಗಳನ್ನು ಸಲ್ಲಿಸಲು ಎರಡು ಸಲ ಕಾಲಾವಕಾಶ ನೀಡಿದ್ದರೂ ವಕ್ಫ್ ಬೋರ್ಡ್ ದಾಖಲೆ ಸಲ್ಲಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ಸ್ವತ್ತಾಗಿ ಪರಿವರ್ತಿಸಲು ಪಾಲಿಕೆ ಮುಂದಾಗಿದೆ.

ಈ ಸಂಬಂಧ ದಾಖಲೆಗಳನ್ನು ಸಿದ್ದಪಡಿಸಲು ಮುಂದಾಗಿದ್ದು, ಶೀಘ್ರದಲ್ಲೇ ವಿವಾದ ಇತ್ಯರ್ಥ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾಗಿ ತಿಳಿದು ಬಂದಿದೆ.

ಇನ್ನೂ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬಿಬಿಎಂಪಿ ಆಟದ ಮೈದಾನವನ್ನಾಗಿ ದಾಖಲಾತಿ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಒಕ್ಕೂಟ ಮನವಿ ಮಾಡಿದೆ.

Edited By :
PublicNext

PublicNext

22/07/2022 07:32 pm

Cinque Terre

13.94 K

Cinque Terre

0

ಸಂಬಂಧಿತ ಸುದ್ದಿ