ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ಮಹಿಳಾ ಘಟಕದ ಪ್ರತಿಭಟನೆ ತಡೆದ ಪೊಲೀಸರು

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಕಾಂಗ್ರೆಸ್ ಭವನದ ಅವರಣದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯದಲ್ಲಿ ಮಹಿಳಾ ಘಟಕದಿಂದ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಗ್ತಿದೆ.

ಬಿಜೆಪಿ ತೋಲಗಲಿ ಎಂದು ಘೋಷಣೆ ಕೂಗುತ್ತಾ, ಮೋದಿ ವಿರುದ್ಧ ಮಹಿಳಾ ಮಣಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಇದೇ ವೇಳೆ ಈ ವೇಳೆ ಪೊಲೀಸ್ ಮತ್ತು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿದೆ. ಪ್ರತಿಭಟನೆಯನ್ನ ಪೊಲೀಸರು ತಡೆದಿದ್ದು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ ಬಿಎಂಟಿಸಿ ಬಸ್ ಮೂಲಕ ಮಹಿಳೆಯರನ್ನ ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಘಟಕದ ಮಹಿಳಾ ರಾಜ್ಯಾಧ್ಯಕ್ಷೆ ಪುಷ್ಪ ಆಮರನಾಥ್ ರವರನ್ನ ಕೂಡ ಪೊಲೀಸರು ಬಂಧನ ಮಾಡಿದ್ದಾರೆ.

Edited By :
PublicNext

PublicNext

04/09/2022 04:35 pm

Cinque Terre

32.32 K

Cinque Terre

0

ಸಂಬಂಧಿತ ಸುದ್ದಿ