ಬೆಂಗಳೂರು: ಡಿ.ಜೆ ಹಳ್ಳಿಯ ದರ್ಗಾದಲ್ಲಿ ಬೆಂಕಿ ಅವಘಢ ಸಂಭವಿಸಿದೆ. ಡಿಜೆಹಳ್ಳಿಯ ಫ್ರೇಜರ್ ಟೌನ್ ರಸ್ತೆಯಲ್ಲಿರುವ ಮಸ್ತಾನಿ ಅಮ್ಮ ದರ್ಗಾ ಕಟ್ಟಡದಲ್ಲಿ ತಡ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.
ನೋಡ ನೋಡ್ತಾ ಇದ್ದಂತೆ ಬೆಂಕಿ ದರ್ಗಾದ ಮೊದಲ ಮಹಡಿಗೆ ಆವರಿಸಿದೆ. ದರ್ಗಾದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಬೆಂಕಿ ನಂದಿಸಿದ್ದಾರೆ.
PublicNext
26/06/2022 01:16 pm