ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ಚಟುವಟಿಕೆ ಗರಿಗೆದರಿದಂತೆ ವಾಹನಗಳ ಸಂಖ್ಯೆ ಕೂಡ ಹೆಚ್ಚಾಗ್ತಿದೆ. ಇದ್ರಿಂದ ವರ್ಷದಿಂದ ವರ್ಷಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗುತ್ತಿದೆ. ಉದ್ಯಾನ ನಗರಿ, ಸಿಲಿಕಾನ್ ಸಿಟಿ ಎಂದು ಕರೆಯಿಸಿಕೊಳ್ಳುವ ಬೆಂಗಳೂರು ಇದೀಗ ಟ್ರಾಫಿಕ್ ಸಿಟಿಯಾಗಿ ಬದಲಾಗ್ತಿದೆ.ಕಳೆದ ವಾರ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾಗಲೂ ನಗರದಲ್ಲಿ ಟ್ರಾಫಿಕ್ ಜಾಮ ಉಂಟಾಗಿತ್ತು.
ಸದ್ಯ ಸಂಚಾರಿ ದಟ್ಟಣೆ ಕಿರಿಕಿರಿಗೆ ಬ್ರೇಕ್ ಹಾಕಲು ಪ್ರಧಾನಿ ಮೋದಿ ಮುಂದಿನ 6 ತಿಂಗಳಲ್ಲಿ ಟ್ರಾಫಿಕ್ ಕಂಟ್ರೋಲ್ ಮಾಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೇರಿದಂತೆ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಷ್ಟೇ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ ಜೊತೆ ಸಭೆ ನಡೆಸಿದ್ದ ಟ್ರಾಫಿಕ್ ಕಮೀಷನರ್ ಆಯಕ್ತ ರವಿಕಾಂತೇಗೌಡ ನಗರದಲ್ಲಿ ಅಧಿಕವಾಗಿರುವ ಪ್ರಮುಖ 10 ಟ್ರಾಫಿಕ್ ಜಂಕ್ಷನ್ ಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಸಿಲ್ಕ್ ಬೋರ್ಡ್, ಜಯದೇವ, ಹೆಬ್ಬಾಳ, ಕೆ.ಆರ್ಪುರಂ, ಗೊರಗುಂಟೆಪಾಳ್ಯ ಹಾಗೂ ಮೈಸೂರು ರಸ್ತೆ ಸೇರಿದಂತೆ 10 ಜಂಕ್ಷನ್ ಗಳನ್ನು ಪಟ್ಟಿ ಸಿದ್ದಪಡಿಸಿ ಪೊಲೀಸ್ ಆಯುಕ್ತರಿಗೆ ಟ್ರಾಫಿಕ್ ಕಮೀಷನರ್ ಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ ಬಿ, ಬೆಸ್ಕಾಂ, ನಗರ ಪೊಲೀಸರ ಸಭೆ ನಡೆದಿತ್ತು.ಈ ನಿಟ್ಟಿನಲ್ಲಿ ಸುಗಮ ಸಂಚಾರ ನಿರ್ಮಾಣ ಕ್ರಮದ ಬಗ್ಗೆ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.
ಪೊಲೀಸ್ ಕಮೀಷನರ್ , ಬಿಬಿಎಂಪಿ ಕಮೀಷನರ್, ನಗರ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಬಿಡಿಎ, ಸ್ಮಾಟ್ ಸಿಟಿ ಅಧಿಕಾರಿಗಳಿಂದ ಇಂದು ರಾತ್ರಿ 10 ಗಂಟೆಗೆ ಸಿಟಿ ರೌಂಡ್ಸ್ ಮಾಡಲಿದ್ದು. ನಗರದಲ್ಲಿ ಹೆಚ್ಚು ಸಂಚಾರಿ ದಟ್ಟಣೆಯಿರುವ ಏರಿಯಾಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಯಾವ ಇಲಾಖೆಯಿಂದ ಏನೇನು ಕೆಲಸ ಆಗಬೇಕು ಎಂಬುದರ ಬಗ್ಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುಲು ಈ ನಗರ ಪ್ರದಕ್ಷಿಣಿಗೆ ಅಧಿಕಾರಿಗಳು ಸಜ್ಜಾಗಿದ್ದಾರೆ.
PublicNext
28/06/2022 01:21 pm