ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆ, ಶೆಡ್ ಗಳ ತೆರವು

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು. ಸದರಿ ಸರ್ವೇ ನಂಬರ್ ನ 6 ಎಕರೆ ಜಮೀನನ್ನು ಎಚ್ ಬಿಆರ್ 2 ನೇ ಹಂತದ ಬಡಾವಣೆ ನಿರ್ಮಾಣಕ್ಕೆ 1989 ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ ಒಂದೂವರೆ ಎಕರೆ ಜಾಗವನ್ನು ವರ್ತುಲ ರಸ್ತೆಗೆ ಬಳಸಿಕೊಳ್ಳಲಾಗಿತ್ತು. ಉಳಿದ ನಾಲ್ಕೂವರೆ ಎಕರೆ ಪೈಕಿ ಒಂದೂವರೆ ಎಕರೆ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ.

ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989 ರಲ್ಲಿ ಸಿಟಿ ಸಿವಿಲ್ ಕೋರ್ಟಿನ ಮೊರೆ ಹೋಗಿದ್ದರಾದರೂ, ಬಿಡಿಎ ಪರವಾಗಿ ತೀರ್ಪು ಬಂದಿತ್ತು. ಇದಲ್ಲದೇ, ಎರಡು ಬಾರಿ ಹೈಕೋರ್ಟ್ ಗೆ ಹೋಗಿದ್ದರೂ ಅಲ್ಲಿಯೂ ಅವರಿಗೆ ಸೋಲುಂಟಾಗಿತ್ತು. ಆದಾಗ್ಯೂ ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಅದರಿಂದ ಆದಾಯ ಗಳಿಸುತ್ತಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.

Edited By :
PublicNext

PublicNext

28/06/2022 03:59 pm

Cinque Terre

38.61 K

Cinque Terre

1

ಸಂಬಂಧಿತ ಸುದ್ದಿ