ಬೆಂಗಳೂರು-ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ. ಈ ಪೈಕಿ ಇಂದು 98 ಕಡೆ ಒಟ್ಟು 154.2 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 1,02,500 ರೂ. ದಂಡ ವಿಧಿಸಲಾಗಿದೆ.
ಅದರಂತೆ, ದಿನಾಂಕ: 01-07-2022 ರಿಂದ 1 3-07-2022 ರವರೆಗೆ 1,319 ಕಡೆ ಒಟ್ಟು 1,926.8 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 8,36,300 ರೂ. ದಂಡ ವಿಧಿಸಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ಗಳಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಪಾಲಿಕೆಯ ಪಾಲಿಕೆ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುವ ಜೊತೆಗೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
Kshetra Samachara
13/07/2022 07:41 pm